Latest

ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಕೊಲೆ ಬಳಿಕ ಆಟೋದಲ್ಲಿ ಎಸ್ಕೇಪ್ ಆಗಿದ್ದು, ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯನಿಗಾಗಿ ಶೋಧ ನಡೆದಿದೆ.

Home add -Advt

24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಪೊಲೀಸರಿಗೆ ತಾಕೀತು ಮಾಡಿದ್ದು, ಇದೀಗ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದೆ. ಪ್ರಮುಖ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.
ವಿಶೇಷ ವಿಮಾನದಲ್ಲಿ ಅಲ್ಲಿಗೆ ಹೊರಟ ರಮೇಶ ಜಾರಕಿಹೊಳಿ: ಏನಿದು ಹೊಸ ಗೇಮ್ ಪ್ಲ್ಯಾನ್?

Related Articles

Back to top button