ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ ಕರೆದಿದ್ದು, ಡೆಲ್ಟಾ ವೈರಸ್ ಚಿಕಿತ್ಸೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇಂದು ಸಜೆ 5:30ಕ್ಕೆ ಸಭೆ ನಡೆಯಲಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ಸೇರಿದಂತೆ ಹಿರಿಯ ಸಚಿವರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಡೆಲ್ಟಾ ವೈರಸ್ ನ ಐದು ಪ್ರಕರಣ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಮೈಸೂರು ಹಾಗೂ ಬೆಂಗಳೂರಿನಲ್ಲಿ ಇಬ್ಬರಲ್ಲಿ ಈ ವೈರಸ್ ಪತ್ತೆಯಾಗಿರುವುದು ದೃಢವಾಗಿದ್ದು, ಮೈಸೂರಿನ ಸೋಂಕಿತ ಗುಣಮುಖರಾಗುತ್ತಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರ ಹಾಗೂ ಕೇರಳಗಳಲ್ಲಿ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಹೆಚ್ಚಿರುವುದರಿಂದ ಗಡಿ ಭಾಗದ ಜಿಲ್ಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮುಂಬೈಯಲ್ಲೇ ತೀರ್ಮಾನ, ಮುಂಬೈಯಲ್ಲೇ ಮಾತು ಎಂದ ರಮೇಶ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ