ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳಾದ ಅಜಯ್, ಪುರುಷೋತ್ತಮ್ ಹಾಗೂ ಸ್ಟೀಫನ್ ಎಂಬುವವರನ್ನು ಪೊಲೀಸರು ಇಂದು ಬೆಂಗಳೂರಿನ 31ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಪೊಲೀಸರ ಮನವಿ ಹಿನ್ನೆಲೆಯಲ್ಲಿ ಕೋರ್ಟ್ ಮೂವರು ಆರೋಪಿಗಳನ್ನು 14 ದಿನಗಳ ಪೊಲಿಸ್ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಈ ನಡುವೆ ರೇಖಾ ಕದಿರೇಶ್ ಹತ್ಯೆ ಹಿಂದೆ ಕುಟುಂಬದ ಕೈವಾಡದ ಬಗ್ಗೆ ಅನುಮಾನ ಮೂಡಿದ್ದು, ರೇಖಾ ಪತಿ ಕದಿರೇಶ್ ಸಹೋದರಿ ಮಾಲಾ ಸಂಚು ರೂಪಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ನಿಟ್ಟಿನಲ್ಲಿ ಪೊಲೀಸರು ಮಾಲಾ ಹಾಗೂ ಆಕೆಯ ಸೊಸೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಪಘಾತಕ್ಕೀಡಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಬಸವರಾಜ ಹೊರಟ್ಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ