ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಸಮಸ್ತ ಜನತೆಗೆ ವ್ಯಾಕ್ಸಿನೇಶನ ನೀಡುವವರೆಗೂ ಸುಮ್ಮನಿರುವುದಿಲ್ಲ ಎಂದು ಶಾಸಕ ಅನಿಲ ಬೆನಕೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ವಿವಿಧ ಪ್ರದೇಶಗಳಲ್ಲಿ ವ್ಯಾಕ್ಸಿನೇಶನ್ ಕ್ಯಾಂಪಗಳನ್ನು ಈಗಾಗಲೆ ಹಮ್ಮಿಕೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರಿಗೂ ವ್ಯಾಕ್ಸಿನೇಶನ್ ನೀಡಬೇಕೆಂದು ನಾನು ಹಾಗೂ ಕಾರ್ಯಕರ್ತರು ಶ್ರಮಿಸುತ್ತಿದ್ದೇವೆ.
ಜಾತಿ ಭೆದ-ಭಾವ, ಭಾಷೆ ಬಿಟ್ಟು ಬೆಳಗಾವಿಯ ಸಂಪೂರ್ಣ ಜನತೆ ನನ್ನ ಕುಟುಂಬ ಎಂದು ತಿಳಿದು ಎಲ್ಲರಿಗು ವ್ಯಾಕ್ಸಿನ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಕಳೆದ ಎರಡು ದಿನಗಳಿಂದ ಲಸಿಕೆ ಅಭಾವದಿಂದಾಗಿ ವ್ಯಾಕ್ಸಿನೇಶನ್ ಶಿಬಿರಗಳನ್ನು ಹಮ್ಮಿಕೊಂಡಿಲ್ಲ. ಈ ವಿಷಯವಾಗಿ ಆರೋಗ್ಯ ಸಚಿವರಾದ ಡಾ. ಸುಧಾಕರ, ಆರೋಗ್ಯ ಕಾರ್ಯದರ್ಶಿಗಳಾದ ಜಾವೇದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೊಳ ಅವರೊಂದಿಗೆ ಚರ್ಚಿಸಲಾಗಿದೆ. ಆದಷ್ಟು ಬೇಗನೆ ಸಾಕಷ್ಟು ವ್ಯಾಕ್ಸಿನೇಶನ್ ಸರಬರಾಜು ಮಾಡುವುದಾಗಿ ತಿಳಿಸಿದ್ದಾರೆ. ಬೆಳಗಾವಿ ಜನತೆಯು ಆತಂಕಕ್ಕೆ ಒಳಗಾಗಬಾರದು. ಯಾವುದೇ ತರಹದ ಉಹಾಪೊಹಕ್ಕೆ ಕಿವಿಗೊಡದೆ ಸರ್ಕಾರ ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿರಬೇಕು. ಸದ್ಯದಲ್ಲೆ ಎಲ್ಲರಿಗೂ ವ್ಯಾಕ್ಸಿನೇಶನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
120ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ