ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿಕ್ಷಕರ ವರ್ಗಾವಣೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ.
2020-21ನೇ ಸಾಲಿನ ಶಿಕ್ಷಕರ ವರ್ಗಾವಣೆ ನಿಯಂತ್ರಣ-ಸಿವಿಲ್ ಸೇವೆಗಳ ತಿದ್ದುಪಡಿ ಕಾಯ್ದೆಗೆ ಅನುಗುಣವಾಗಿ ವರ್ಗಾವಣೆ ಆರಂಭಿಸಲು ನಿರ್ಧರಿಸಲಾಗಿದೆ. ಅಧಿಸೂಚನೆ ಕರಡು ಸಿದ್ಧವಾಗಿದ್ದು, ಶಿಕ್ಷಣ ಸಚಿವರ ಅನುಮೋದನೆ ಮಾತ್ರ ಬಾಕಿಯಿದೆ.
ವರ್ಗಾವಣೆಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ವರ್ಗಾವಣೆ ಬಯಸಿದ ಸ್ಥಳ ಬದಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಅಲ್ಲದೇ ಜೇಷ್ಠತಾ ಕ್ರಮಾಂಕದ ಆಧಾರದ ಮೇಲೆ ವರ್ಗಾವಣೆ ಅಂತಿಮಗೊಳಿಸಲಾಗುವುದು. ಬಹುತೇಕ ನಾಳೆ ಶಿಕ್ಷಕರ ವರ್ಗಾವಣೆ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ನಲ್ಲಿಯೂ ಲಿಂಗಾಯತ ನಾಯಕರಿದ್ದೇವೆ; ಸಿಎಂ ಅಭ್ಯರ್ಥಿ ಬಗ್ಗೆ ಹೊಸ ಚರ್ಚೆ ಹುಟ್ಟುಹಾಕಿದ ಎಂ.ಬಿ.ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ