ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಪತ್ತೆಯಾಗಿದ್ದು, ಇದನ್ನು ತಡೆಯಲು ಲಸಿಕೆ ಪಡೆಯುವುದೊಂದೇ ಪರಿಹಾರ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಡೆಲ್ಟಾ ಪ್ಲಸ್ ವೈರಸ್ ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಟೆಸ್ಟ್ ಸಂಖ್ಯೆ ಹೆಚ್ಚಿಸಲು ಸೂಚಿಸಲಾಗಿದೆ. ಮಹಾರಾಷ್ಟ್ರ, ಕೇರಳದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದ್ದು, ಗಡಿ ಭಾಗಗಳಲ್ಲಿ ಆರ್ ಟಿಪಿಸಿ ಆರ್ ಕಡ್ಡಾಯಗೊಳಿಸಲಾಗಿದೆ ಎಂದರು.
ಮಕ್ಕಳು ಶಾಲೆಗೆ ತೆರಳುವ ಸಾಧ್ಯತೆ ಬಂದರೆ 10 ವರ್ಷದ ಮಕ್ಕಳ ಪೋಷಕರಿಗೆ ಲಸಿಕೆ ನೀಡಲಾಗುತ್ತದೆ. ಕಡ್ಡಾಯವಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳುವುವ ಅಗತ್ಯವಿದೆ. ಇನ್ನು ಶೀಘ್ರದಲ್ಲಿಯೇ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ