ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂಪಾಯಿ ಮಾನನಷ್ಟ ಮೊಕದ್ದಮೆ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸ್ಯಾಂಡಲ್ ವುಡ್ ನಟ ಚೇತನ್, ಸಚಿವ ಸ್ಥಾನದಲ್ಲಿದ್ದು, ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ನಾನು ಹಣಕ್ಕಾಗಿ ಹೇಳಿಕೆ ನೀಡುತ್ತಿಲ್ಲ ಎಂಬುದನ್ನು ತಿಳಿಸಲು 1 ರೂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಟ ಚೇತನ್, ಸಚಿವರು ಗಂಜಿ ಕಾಸಿಗಾಗಿ, ಪ್ರಚಾರಕ್ಕಾಗಿ ನಾನು ಹೇಳಿಕೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಜೊತೆಗೆ ನನ್ನನ್ನು ಬಂಧಿಸುವಂತೆ ಸಿಎಂಗೆ ಒತ್ತಾಯಿಸಿದ್ದಾರೆ. ಗೌರವ ಸ್ಥಾನದಲ್ಲಿರುವ ಅವರು ನಮಗೆ ಸ್ಫೂರ್ತಿಯಾಗಬೇಕು. ಸಚಿವರಾದವರು ಹೀಗೆಲ್ಲ ಮಾತನಾಡುವುದು ಸರಿಯಲ್ಲ. ಇದರಿಂದ ನನಗೆ ದುಡ್ಡು ಮಾಡಬೇಕಿಲ್ಲ ಹಾಗಾಗಿ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ಸಚಿವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಚೇತನ್ ಹೇಳಿಕೆ ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸಚಿವ ಹೆಬ್ಬಾರ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇನ್ನು ಬ್ರಾಹ್ಮಣರ ವಿರುದ್ಧ ಹೇಳಿಕೆ ನೀಡಿದ್ದ ಚೇತನ್ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ.
ಕಾಂಗ್ರೆಸ್ ನಲ್ಲಿಯೂ ಲಿಂಗಾಯತ ನಾಯಕರಿದ್ದೇವೆ; ಸಿಎಂ ಅಭ್ಯರ್ಥಿ ಬಗ್ಗೆ ಹೊಸ ಚರ್ಚೆ ಹುಟ್ಟುಹಾಕಿದ ಎಂ.ಬಿ.ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ