ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದು ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು ಎಂದಿದ್ದಾರೆ.
ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುವುದನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀವೇ ಕೇಳಬೇಕು ಎಂದರು.
ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದನ್ನು ನಾವು ಏನು ಹೇಳಲಿಕ್ಕೆ ಬರುವುದಿಲ್ಲ. ಅದಕ್ಕೂ ನಮಗೂ ಸಂಬಂಧವಿಲ್ಲವೆಂದರು.
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಗೊಂದಲಕ್ಕೆ ಸಂಬಂಧ ಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನಾಯಕತ್ವ ಎಂಬುವುದು ಮುಗಿದು ಹೋಗಿದೆ. ಮುಖ್ಯಮಂತ್ರಿ ಯಾರು ಎಂಬುವುದು 2023 ಮೇ ತಿಂಗಳ ಅಂತ್ಯಕ್ಕೆ ತಿಳಿಯಲಿದೆ. ಈಗ ಚರ್ಚೆ ಮಾಡುವುದು ಅನಾವಶ್ಯಕ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಪರಿಹಾರ ಮಾಡುವುದಕ್ಕೆ ವರಿಷ್ಠ ನಾಯಕರು ಇದಾರೆ. ಅವರು ಗಮನಿಸುತ್ತಾರೆ. ಇದರ ಮಧ್ಯ ನಾವು ಪ್ರವೇಶ ಮಾಡಿಲ್ಲ ಎಂದು ತಿಳಿಸಿದರು.
ರಮೇಶ್ ಜಾರಕಿಹೊಳಿ ಪರ ಆರ್.ಅಶೋಕ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ