ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಚಿವ ಸ್ಥಾನಕ್ಕಾಗಿ ಒತ್ತಡ ಹೇರಲು ದೆಹಲಿಗೆ ತೆರಳಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವರಿಷ್ಠರ ಭೇಟಿ ಸಾಧ್ಯವಾಗದೇ ವಾಪಸ್ ಆಗಿದ್ದಾರೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಸಹೋದರರ ಸಲಹೆಯಂತೆ ಕಾದುನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.
ವರಿಷ್ಠರ ಭೇಟಿಗೆಂದು ದಿಢೀರ್ ದೆಹಲಿಗೆ ಪ್ರಯಾಣಿಸಿದ್ದ ರಮೇಶ್ ಜಾರಕಿಹೊಳಿ ದೇವೇಂದ್ರ ಫಡ್ನವೀಸ್ ಹೊರತಾಗಿ ಬೇರಾವ ಬಿಜೆಪಿ ನಾಯಕರನ್ನು ಭೇಟಿಯಾಗಲು ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಜುಲೈ 5ರಂದು ಹೈಕೋರ್ಟ್ ನಲ್ಲಿ ನಡೆಯಲಿರುವ ಸಿಡಿ ಕೇಸ್ ವಿಚಾರಣೆ ವೇಳೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಇದ್ದು, ಕ್ಲೀನ್ ಚಿಟ್ ಬಳಿಕ ವರಿಷ್ಠರ ಭೇಟಿ ಮಾಡಿದರೆ ಸಚಿವ ಸ್ಥಾನದ ತಮ್ಮ ಬೇಡಿಕೆಗೆ ಬಲಬರಲಿದೆ. ಹೀಗಾಗಿ ಜುಲೈ 5ರವರೆಗೆ ಕಾಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಕ್ಲೀನ್ ಚಿಟ್ ಸಿಗದಿದ್ದರೆ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ವರಿಷ್ಠರಿಗೆ ಮನವಿ ಮಾಡಲಿದ್ದು, ಆ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಲು ಇಂದು ಸಂಜೆ ಸಹೋದರರೊಂದಿಗೆ ಮತ್ತೊಮ್ಮೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಹಿಳೆಯರ ಸಾಗಾಟ ಪ್ರಕರಣಕ್ಕೆ ಸ್ಫೋಟಕ ತಿರುವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ