ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ರಣತಂತ್ರ ರೂಪಿಸುತ್ತಿದ್ದು, ಮಾ.31ರಂದು ಬೃಹತ್ ಜಂಟಿ ಸಮಾವೇಶ ನಡೆಸಲಿವೆ.
ಬೆಂಗಳೂರಿನಲ್ಲಿ ಇಂದು ಜಂಟಿ ಸಭೆ ನಡೆಸಿದ ನಂತರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು.
ಮಾ.31ರಂದು ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಭಾಗವಹಿಸಲಿದ್ದಾರೆ. ಇದಾದ ನಂತರ ರಾಜ್ಯಾದ್ಯಂತ ಜಂಟಿ ಪ್ರಚಾರ ಕೈಗೊಳ್ಳುತ್ತೇವೆ. ರಾಜ್ಯ ಹಾಗೂ ರಾಷ್ಟ್ರದ ಹಿತದೃಷ್ಟಿಯಿಂತ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ. ನಮ್ಮಲ್ಲಿರುವ ಸಮ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.
ನಾನು ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎನ್ನುವ ಕುರಿತು ಮತ್ತು ಎಲ್ಲಿಂದ ಸ್ಪರ್ಧಿಸಬೇಕು ಎನ್ನುವ ಕುರಿತು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ದೇವೇಗೌಡ ಹೇಳಿದರು.
ನಿನ್ನೆ ರಾಹುಲ ಗಾಂಧಿ ಸಮಾವೇಷದಲ್ಲಿ ಮೋದಿ ಪರವಾದ ಘೋಷಣೆ ಕೂಗಿದವರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಲಾಗಿದೆ. ಬಿಜೆಪಿಯವರು ಬಂದು ಅಲ್ಲಿ ಸಮಾವೇಶಕ್ಕೆ ಅಡ್ಡಿಪಡಿಸಲು ಯತ್ನಿಸಿದರು ಎಂದು ಸಿದ್ದರಾಮಯ್ಯ ಹೇಳಿದರು.
ವಿಶೇಷವೆಂದರೆ ಸಭೆ ಮತ್ತು ಪತ್ರಿಕಾಗೋಷ್ಠಿ ಎರಡಕ್ಕೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಗೈರಾಗಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲ ಗ್ರುಪ್ ಗಳಿಗೂ ಮತ್ತು ನಿಮ್ಮ ಪರಿಚಿತರಿಗೆಲ್ಲ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ