Latest

ನಾಳೆಯಿಂದ ದೇವರ ದರ್ಶನ; ಆದರೆ ಷರತ್ತು ಅನ್ವಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಗ್ಗಿದ ಬೆನ್ನಲ್ಲೇ ನಾಳೆಯಿಂದ ರಾಜ್ಯಾದ್ಯಂತ ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಜಾರಿಗೆ ಬರಲಿದ್ದು, ಮೊದಲಿನಂತೆಯೇ ಜನಜೀವನ ಬಹುತೇಕ ಸಹಜ ಸ್ಥಿತಿಯತ್ತ ಮರಳಲಿದೆ. ವಾಣಿಜ್ಯ ಚಟುವಟಿಕೆ, ಸಾರಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಮುಂಜಾನೆ 5ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸರ್ಕಾರಿ, ಖಾಸಗಿ ಕಚೇರಿ, ಅಂಗಡಿ, ಹೋಟೆಲ್, ಬಾರ್ ರೆಸ್ಟೋರೆಂಟ್, ಶಾಪಿಂಗ್ ಮಾಲ್, ಕ್ರೀಡೆ, ಮನರಂಜನೆ, ಕೌಟುಂಬಿಕ ಸಮಾರಂಭ, ಮಠ, ಮಂದಿರ, ಚರ್ಚ್ ಸೇರಿದಂತೆ ಬಹುತೇಕ ಎಲ್ಲವನ್ನು ತೆರೆಯಲು ಅವಕಾಶ ನಿಡಲಾಗಿದ್ದು, ಶೇ.100ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಕೂಡ ಅನುವುಮಾಡಿಕೊಡಲಾಗಿದೆ.

Related Articles

ನಾಳೆಯಿಂದ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೆ ಬರಲಿದ್ದು, ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗುತ್ತಿದೆ. ಕರ್ಫ್ಯೂ ವೇಳೆ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.

ಇನ್ನು ನಾಳೆಯಿಂದ ರಾಜ್ಯಾದ್ಯಂತ ದೇವಾಲಯಗಳ ಬಾಗಿಲು ತೆರೆಯಲಿದ್ದು, ಭಕ್ತರಿಗೆ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಹಾಗಾಗಿ ದೇವಾಲಯಗಳಲ್ಲಿ ಸಚ್ಛತಾಕಾರ್ಯ, ಸ್ಯಾನಿಟೈಸ್ ಸಿಂಪಡಣೆ ಆರಂಭವಾಗಿದ್ದು, ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನ ಮತ್ತು ಆರತಿ ಸೇವೆಗಷ್ಟೇ ಅವಕಾಶವಿದ್ದು, ವಿಶೇಷ ಪೂಜೆ, ತೀರ್ಥ, ಪ್ರಸಾದ ಸೇವನೆಗೆ ಯಾವುದೇ ಅವಕಾಶವಿಲ್ಲ.

ನಾಳೆಯಿಂದ ರಾಜ್ಯಾದ್ಯಂತ ದೇವಾಲಯಗಳಲ್ಲಿ ಭಕ್ತರಿಗೆ ಅವಕಾಶ ನೀಡಲು ಸಿದ್ಧತೆ ನಡೆದಿದೆ. ಆದರೆ ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಇನ್ನು ಒಂದು ವಾರಕಾಲ ಅವಕಾಶವಿಲ್ಲ. ಸುತ್ತಮುತ್ತಲಿನ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ಒಂದು ವಾರದ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಕೃಷ್ಣಮಠದ ಪರ್ಯಾಯ ಅದಮಾರು ಶ್ರೀ ಈಶ ತೀರ್ಥರು ತಿಳಿಸಿದ್ದಾರೆ.

ಹನಿಟ್ರ್ಯಾಪ್ ಪ್ರಕರಣ; ಯುವತಿ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button