Latest

ಈಶಾನ್ಯ ಸಾರಿಗೆ ನಿಗಮಕ್ಕೆ ಮರುನಾಮಕರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಬಹುದಿನಗಳ ಬೇಡಿಕೆ ಸ್ಥಳೀಯರಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸಂಪುಟದ ನೂತನ ಸಚಿವರ ಪಟ್ಟಿ ಇಲ್ಲಿದೆ…

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button