ಪ್ರಗತಿವಾಹಿನಿ ಸುದ್ದಿ, ಚೆನ್ನೈ – ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಕುರಿತು ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.
ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಎಲ್ ಮುರುಗನ್ ಅವರನ್ನು ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ ನೇಮಕ ಮಾಡಿರುವುದರಿಂದ ಆ ಸ್ಥಾನ ತೆರವಾಗಿತ್ತು.
ಹಾಗಾಗಿ ಅಣ್ಣಾ ಮಲೈ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡಲಾಗಿದೆ. 2024ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಲೇ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ.
ರಾಜ್ಯ ಘಟಕವನ್ನು ಸಂಪೂರ್ಣ ಪುನರ್ ರಚಿಸುವ ಸಾಧ್ಯತೆ ಇದೆ.
ನನ್ನ ಹಾಗೂ ಆದಿಚುಂಚನಗಿರಿ ಮಠಾಧೀಶರ ಫೋನ್ ಕದ್ದಾಲಿಕೆಯಾಗಿದೆ; ಹೊಸ ಬಾಂಬ್ ಸಿಡಿಸಿದ ಸುಮಲತಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ