ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜುಲೈ 18ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಆಕಾಶವಾಣಿ ಕೇಂದ್ರದ ಬಳಿ ಗುಡ್ಡ ಕುಸಿತವುಂಟಾಗಿದ್ದು ಸುತ್ತ ಮುತ್ತಲ ಮನೆಗಳಿಗೆ ಆತಂಕ ಎದುರಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 14 ಹಾಗೂ 18ರಂದು ಯೆಲ್ಲೋ ಅಲರ್ಟ್ ಘೋಷೊಸಲಾಗಿದ್ದು, ಜುಲೈ 15, 16, 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಜುಲೈ 14, 15 ಹಾಗೂ 17ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ನದಿ ಪಾತ್ರದ ಜನತೆಗೆ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗುತ್ತಿದೆ.
ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ