ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಲಾಗಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುವಂತೆ ಎಜಿ ಗೆ ಹೈಕೋರ್ಟ್ ಸೂಚಿಸಿದೆ.
ಹೈಕೋರ್ಟ್ ಸೂಚನೆಗೆ ಪ್ರತಿಕ್ರಿಯಿಸಿದ ಎಜಿ ಪ್ರಭುಲಿಂಗ ನಾವದಗಿ, ಜುಲೈ 19ರಂದು ಮುಚ್ಚಿದ ಲಕೋಟೆಯಲ್ಲಿ ತನಿಖೆ ಮುಕ್ತಾಯದ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 20ಕ್ಕೆ ಮುಂದೂಡಿದೆ.
ಕುತೂಹಲ ಮೂಡಿಸಿದ ಸಿಎಂ ಬಿಎಸ್ ವೈ ಜೊತೆ ದೆಹಲಿಗೆ ಹೊರಟವರ ಪಟ್ಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ