ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಬೇಡ. ಪರೀಕ್ಷೆಯ ಎಲ್ಲಾ ಕೇಂದ್ರಗಳಲ್ಲಿ ಸರ್ಕಾರದಿಂದ ಸ್ಯಾನಿಟೈಜರ್, ಮಾಸ್ಕ್, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಹಾಗೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಅರುಣ ಶಹಾಪುರ ಧೈರ್ಯ ತುಂಬಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೇ ಎದುರಿಸಬೇಕು. ಕೋವಿಡ್ ಬಗ್ಗೆ ಹೆದರದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ. ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ ವಿದ್ಯರಥಿಗಳಿಗೆ ಶುಭವಾಗಲಿ. ಇದಕ್ಕೆ ಸಹಕರಿಸಲಿರುವ ಎಲ್ಲಾ ಶಿಕ್ಷಕ ವೃಂದ ಹಾಗೂ ಜಿಲ್ಲಾಡಳಿತ ವರ್ಗಕ್ಕೂ ಅಭಿನಂದನೆಗಳು ಎಂದು ಜೊಲ್ಲೆ ತಿಳಿಸಿದ್ದಾರೆ.
ಇದೇ ವೇಳೆ ಶಾಸಕ ಅರುಣ ಶಹಾಪುರ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದು, ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ಪರೀಕ್ಷೆ ಬರೆಯುವಂತೆ ತಿಳಿಸಿದ್ದಾರೆ. ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಜೀವನ ಸಾಗಿಸುವ ಜೊತೆಗೆ, ನಮ್ಮ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸುವುದು ಅನಿವಾರ್ಯ. ಸರ್ಕಾರವು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಎಲ್ಲ ರೀತಿಯ ಸುರಕ್ಷತೆಯ ದೃಷ್ಟಿಯಿಂದ ಸ್ಯಾನಿಟೈಸರ್, ಮಾಸ್ಕ್, ಕುಡಿಯುವ ನೀರು, ಪ್ರಯಾಣದ ವ್ಯವಸ್ಥೆಯನ್ನು ಮಾಡಿದೆ. ನಮ್ಮ ಪೋಷಕರೂ ಸಹ ಯಾವೂದೇ ಆತಂಕ ಪಡದೇ ವಿದ್ಯಾರ್ಥಿಗಳಿಗೆ ಹುರಿದುಂಬಿಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಬೇಕು.
ಈ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗ, ಅಧಿಕಾರಿಗಳು ಹಾಗೂ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸುರಕ್ಷಿತ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಹಾಗೂ ಪರೀಕ್ಷೆ ಎದುರಿಸುತ್ತಿರುವ ಎಲ್ಲ ಮಕ್ಕಳಿಗೆ ಶುಭ ಕೋರುತ್ತಾ ಸುರಕ್ಷಿತ ಹಾಗೂ ಯಶಸ್ವಿ ಪರೀಕ್ಷೆಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.
ಬಹುದಿನಗಳ ಕನಸು ಸಾಕಾರ – ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ