Latest

ಸಿಎಂ ಬಿಎಸ್ ವೈಗೆ ಹೈಕಮಾಂಡ್ ನೀಡಿದ ಸೂಚನೆಯೇನು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಮುಕ್ತಾಯವಾಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರವಂತೆ ಹೈಕಮಾಂಡ್ ಸೂಚಿಸಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ, ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಅಮಿತ್ ಶಾ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, ವರಿಷ್ಠರು ನಮ್ಮ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಉತ್ತಮ ಭವಿಷ್ಯವಿದ್ದು, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಸೂಚಿಸಿದ್ದಾರೆ ಎಂದರು.

ನಮಗೆ ನಿಮ್ಮ ಮೇಲೆ ವಿಶ್ವಾಸವಿದ್ದು, ಉತ್ತಮ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಜವಾಬ್ದಾರಿ ನಿಮ್ಮ ಮೇಲೆದೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೂ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಯಾವುದೆ ಕಾರಣಕ್ಕು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಪಕ್ಷದ ಒಳಿತಾಗಿ ಹಗಲಿರುಳು ಶ್ರಮಿಸಿ, ರಾಜ್ಯದಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ವರಿಷ್ಠರಿಗೆ ಭರವಸೆ ನೀಡಿದ್ದೇನೆ ಎಂದು ಹೇಳಿದರು.

ಇನ್ನು ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ. ಇಡೀ ದೇಶದ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button