Latest

ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಈ ನಡುವೆ ನಾಳೆ ಬೆಳಿಗ್ಗೆ 5ಗಂಟೆಗೆ ಅನ್ ಲಾಕ್-3.0 ಅವಧಿ ಮುಕ್ತಾಯವಾಗಲಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ತೆರೆಯಲು ಅನುಮತಿಗೆ ನಿರ್ಧರಿಸಲಾಗಿದೆ. ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ನಾಳೆಯಿಂದ ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ಭಕ್ತರು ವಿಶೇಷ ಪೂಜೆಗಳಲ್ಲೂ ಭಾಗಿಯಾಗಬಹುದು.

ಅಲ್ಲದೇ ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಅನ್ ಲಾಕ್ 3.O ನಾಳೆ ಅಂತ್ಯ: ಮುಂದೇನು?

ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button