ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವರುಣನ ಆರ್ಭಟಕ್ಕೆ ಈಗಾಗಲೆ ಕರಾವಳಿ ಜಿಲ್ಲೆಗಳು ತತ್ತರಗೊಂಡಿದ್ದು, ಜುಲೈ 21ರವರೆಗೆ ಗುಡು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 20 ಹಾಗೂ 21ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಧಾರವಾಡ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ಮೈಸೂರು ಜಿಲ್ಲೆಗಳಲ್ಲಿ ನಾಳೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಜುಲೈ 20 ಹಾಗೂ ಜುಲೈ 21ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ನದಿ ತೀರದ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲು ಜಿಲ್ಲಾಡಳಿತಕ್ಕೆ ತಿಳಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ನಾಳೆಯಿಂದ ಅನ್ ಲಾಕ್-4.O ಜಾರಿ; ಏನಿರುತ್ತೆ, ಏನಿರಲ್ಲ…?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ