ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಶ್ಲೀಲ ಸಿನಿಮಾಗಳನ್ನು ನಿರ್ಮಿಸಿ ಪ್ರಕಟಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಬಂಧನವಾಗಿದ್ದು, ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬ್ಲ್ಯೂ ಫಿಲ್ಮಂ ಚಿತ್ರಿಸಿ, ಕೆಲ ಆಪ್ ಗಳ ಮೂಲಕ ಅಪ್ ಲೋಡ್ ಮಾಡುತ್ತಿದ್ದಾರೆ ಎಂಬ ಆರೋಪ ರಾಜ್ ಕುಂದ್ರಾ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ಕ್ರೈಂ ಬ್ರಾಂಚ್ ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಮಾಹಿತಿ ಆಧರಿಸಿ ರಾಜ್ ಕುಂದ್ರಾ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಇಡೀ ಪ್ರಕರಣದ ರೂವಾರಿ ಅವರೇ ಎಂಬುದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ ಎಂದು ಮುಂಬೈ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರಾಜ್ ಕುಂದ್ರಾ ಅವರನ್ನು ಬಂಧಿಸಿರುವ ಪೊಲೀಸರು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜುಲೈ 23ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಯಾಲಯ ಆದೇಶ ನೀಡಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬಿಜೆಪಿ ಹೈಕಮಾಂಡ್ ಗೆ ಮಠಾಧೀಶರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ