Latest

ರಾಜೀನಾಮೆಗೆ ಮುಂದಾದ್ರಾ ವಲಸಿಗ ಸಚಿವರು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ವಿಚಾರ ತೀವ್ರ ಚರ್ಚೆಯಲ್ಲಿರುವ ನಡುವೆಯೇ ಇದೀಗ ವಲಸಿಗ ಸಚಿವರು ಪ್ರತ್ಯೇಕ ಪತ್ರಗಳನ್ನು ಹಿಡಿದು ಸಿಎಂ ಬಿ.ಎಸ್.ಯಡಿಯೂರಪ್ಪನರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದರೆ ವಲಸಿಗ ಸಚಿವರುಗಳಿಗೆ ಮಂತ್ರಿಸ್ಥಾನದ ಬಗ್ಗೆ ಅತಂತ್ರ ಸ್ಥಿತಿ ಆತಂಕ ಎದುರಾಗಿದ್ದು, ಈ ನಿಟ್ಟಿನಲ್ಲಿ ಪ್ರತ್ಯೇಕ ಸಭೆ ನಡೆಸಿದ ಬಳಿಕ ಸಚಿವರಾದ ಕೆ.ಸುಧಾಕರ್, ಬಿ.ಸಿ.ಪಾಟೀಲ್, ಗೋಪಾಲಯ್ಯ,ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಪ್ರತ್ಯೇಕವಾಗಿ ಪತ್ರಗಳನ್ನು ಹಿಡಿದು ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಿದರೆ ಬಾಂಬೆ ಮಿತ್ರಮಂಡಳಿ ಸದಸ್ಯರಿಗೆ ತಮ್ಮ ಮಂತ್ರಿ ಸ್ಥಾನದ ಭವಿಷ್ಯದ ಬಗ್ಗೆ ಚಿಂತೆ ಶುರುವಾಗಿದ್ದು, ಈ ನಿಟ್ಟಿನಲ್ಲಿ ತಾವೂ ಕೂಡ ರಾಜೀನಾಮೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಅಭಿವೃದ್ದಿ ಕೆಲಸಗಳ ಕುರಿತಾಗಿನ ಅನುಮೋದನೆ ಸೇರಿದಂತೆ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಅಂಶಗಳ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಸಿಎಂ ಭೇಟಿಯಾಗಿ ಸಮ್ಮತಿ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ಯಡಿಯೂರಪ್ಪ ರಾಜೀನಾಮೆ ಸುದ್ದಿ ಬೆನ್ನಲ್ಲೇ ವಿಧಾನಸೌಧದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಬಾಂಬೆ ಮಿತ್ರಮಂಡಳಿ ಸದಸ್ಯರ ಹೊಸ ವರಸೆ ಕುತೂಹಲ ಮೂಡಿಸಿದೆ.

ರಾಜೀನಾಮೆ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಬಿಎಸ್ ವೈ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button