Kannada NewsKarnataka NewsLatest

ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ; ವಿವಿಧ ಜಲಾಶಯಗಳ ಸ್ಥಿತಿ ಗತಿ ಮಾಹಿತಿ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನವಿಲುತೀರ್ಥ  (ಮಲಪ್ರಭಾ) ಅಣೆಕಟ್ಟೆಯಿಂದ ಸುಮಾರು 2000 ಕ್ಯೂಸೆಕ್ಸ್ ನಷ್ಟು ನೀರನ್ನು ಹೊರ ಬಿಡಲಾಗುತ್ತಿದೆ.

ಇದರಿಂದಾಗಿ ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಸಾಯಂಕಾಲದ ಹೊತ್ತಿಗೆ 5000  ಕ್ಯೂಸೆಕ್ಸ್ ನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ.

ರಾಮದುರ್ಗ, ಗದಗ, ಬಾದಾಮಿ ಜನತೆಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಎಚ್ಚರಿಕೆ ನೀಡಲಾಗಿದೆ.

 

ವ್ಯಾಪಕ ಮಳೆ: ಪ್ರವಾಹ ನಿರ್ವಹಣೆಗೆ ಎಲ್ಲಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ಹಾವಳಿ ಹೆಚ್ಚುತ್ತಿರುವ ಕಾರಣ ಜನ-ಜಾನುವಾರಗಳ ರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾ ಉಸ್ತವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರದು, ಔಷಧೋಪಚಾರದೊಂದಿಗೆ ಜನರ ಆರೋಗ್ಯ ಹಾಗೂ ಜಾನುವಾರುಗಳಿಗೆ ಆಹಾರ ವ್ಯವಸ್ಥೆಯನ್ನು ಮಾಡುವುದು ಹಾಗೂ ರಸ್ತೆ ಸೇತುವೆ ಹಾಳಾಗಿದ್ದರೆ ಕೂಡಲೇ ದುರಸ್ತಿ, ಕೆರೆ ಕಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಎಲ್ಲಾ ಕೆಲಸಗಳನ್ನೂ ಮುತುವರ್ಜಿಯಿಂದ ಅತ್ಯಂತ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು.

ಈ ನಿಟ್ಟಿನಲ್ಲಿ ಸರಕಾರದ ವಿವಿಧ ಇಲಾಖೆಗಳ ಮೂಲಕ (ಆರೋಗ್ಯ, ಕಂದಾಯ, ಲೋಕೋಪಯೋಗಿ, ಪೊಲೀಸ್) ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡಬೇಕು ಹಾಗೂ ಜನರ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಎಲ್ಲಾ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸೂಚನೆ ನೀಡುವದು ಹಾಗೂ ಕರ್ತವ್ಯಲೋಪ ಮಾಡುವಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಹಾಗೂ ಎಲ್ಲಾ ಕಾರ್ಯಗಳನ್ನು ಅತ್ಯಂತ ಜಾಗೂಕತೆಯಿಂದ ನಿರ್ವಹಿಸಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ವಿವಿಧ ಜಲಾಶಯಗಳ ಸ್ಥಿತಿ ಗತಿ

*Koyna Dam*
Dt: 23/07/2021
Time : 12.00 hr

Water level : 2145′ 08″ (653.999m)

*Dam Storage:*
Gross: 84.02TMC
Live: 78.90TMC

*Inflow* :
Avg (6 hr) – 81,429usecs
Last hr- 1,05,572, cusecs
Avg(24hr)- 2,48,,906 cusecs

*Discharges*
KDPH- 2100
Radial Gate: 6 Gates by 10 feet- 40,335
Total Discharge in Koyna River : 42,435 Cusecs

*Rain fall* (mm)
Today’s/cumulative
Koyna: 82/2499
Navaja : 64/3361
Mahabaleshwar : 37/3100

 

*Status of Narayanpur reservoir*

*Date : 23.07.2021 @ 13:00 Hrs*

Water level RL: *490.68* mtr.
*Inflow =1,72,000 Cusec*

Outflow to Krishna river= *2,58,290 cusecs* ( spillway gates 29 nos )
Present storage = *26.58 TMC (79.80%)*

(Max Storage of dam @ RL 492.25 m =33.31 TMC)


ಭೂ ಕುಸಿತ, ಗೋವಾ, ಖಾನಾಪುರ ಸಂಪರ್ಕ ಕಡಿತ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button