ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಕೃಷ್ಣಾ ನದಿಯಲ್ಲಿ ಇಂದು ಮತ್ತಷ್ಟು ನೀರು ಹೆಚ್ಚಾಗುವ ಸಾಧ್ಯತೆ ಇದ್ದು, ಎರಡು ಮೂರು ದಿನಗಳಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಈ ನಡುವೆ ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಸಿದ್ದಾರೆ.
ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದ್ದು, ನದಿ ತೀರದ ಪ್ರದೇಶದಲ್ಲಿ ಮುಂಜಾಗೃತಾ ಕ್ರಮವಾಗಿ ಎನ್.ಡಿ.ಆರ್ ಎಫ್ ತಂದ ನಿಯೋಜಿಸಲಾಗಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, 18 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿವೆ 131 ಗ್ರಾಮಗಳು ಜಲಾವೃತಗೊಂಡಿವೆ.
ಎಲ್ಲಾ ಜಿಲ್ಲಾಡಳಿತಕ್ಕೂ ಹೈ ಅಲರ್ಟ್ ಗೆ ಸೂಚಿಸಿದ್ದು, ಪ್ರವಾಹದಲ್ಲಿ ಸಿಲುಕಿದವರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲು ತಿಳಿಸಲಾಗಿದೆ ಎಂದಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ