ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಬೆಳಗಾವಿಯಲ್ಲಿ ಕಳೆದ 3 -4 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಯಡಿಯೂರಪ್ಪ ಅವಲೋಕನ ನಡೆಸಲಿದ್ದಾರೆ.
ಬೆಳಗಾವಿಗೆ ಆಗಮಿಸಿ ನಂತರ ಅವರು ವಿವಿಧ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುವ ಸಾಧ್ಯತೆ ಇದೆ. ನಂತರ ಪರಿಶೀಲನಾ ಸಭೆಯನ್ನೂ ನಡೆಸಲಿದ್ದಾರೆ.
ನಿನ್ನೆ ಜಿಲ್ಲಾಧಿಕಾರಿಗಳ ಜೊತೆ ಅವರು ವಿಡಿಯೋ ಸಂವಾದ ನಡೆಸಿದ್ದರು.
ಡಿಸಿಎಂ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲೆಯ ಸಚಿವರು ಸೇರಿದಂತೆ ಕೆಲವು ಸಚಿವರು ಅವರೊಂದಿಗಿರಲಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಹರಡಿರುವುದರಿಂದ ಹಾಗಾದಲ್ಲಿ ಬೆಳಗಾವಿಗೆ ಅವರ ಮುಖ್ಯಮಂತ್ರಿ ಸ್ಥಾನದ ಕೊನೆಯ ಭೇಟಿಯಾಗಬಹುದು.
ಬೆಳಗಾವಿ ಜಿಲ್ಲೆಯಲ್ಲಿ 47 ರಸ್ತೆ ಸಂಚಾರ ಸ್ಥಗಿತ, 51 ಗ್ರಾಮಗಳು ಜಲಾವೃತ : ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ