ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಉದ್ಯಮಿಗೆ 10 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬೆಂಗಳೂರಿನ ವೈಟ್ ಫೀಲ್ಡ್ ಕ್ರೈಂ ಇನ್ಸ್ ಪೆಕ್ಟರ್ ರೇಣುಕಾ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಇನ್ಸ್ ಪೆಕ್ಟರ್ ರೇಣುಕಾ, ಎಸ್.ಐ ಗಣೇಶ್ ಹಾಗೂ ಕಾನ್ಸ್ ಟೇಬಲ್ ಹೇಮಂತ್ ವಿರುದ್ಧ ಎಸಿಬಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಉದ್ಯಮಿ ಗೋಪಿನಾಥ್ ಎಂಬುವವರನ್ನು ಬ್ಯಾಂಕಿಗೆ ಕರೆದೊಯ್ದು ಬಲವಂತವಾಗಿ 5 ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿಸಿ ಉಳಿದ 5 ಲಕ್ಷರೂಪಾಯಿಗೆ ಸಮಯ ನೀಡಿ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಗೋಪಿನಾಥ್ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ನಾಳೆ ಬೆಳಗಾವಿಗೆ ಸಿಎಂ ಯಡಿಯೂರಪ್ಪ ಭೇಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ