Kannada NewsLatest

ಬೆಳಗಾವಿಯಲ್ಲಿ ಆಸ್ಪತ್ರೆಗೆ ನುಗ್ಗಿದ ನೀರು; ಗರ್ಭಿಣಿ ಪರದಾಟ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭಾರಿ ಮಳೆಯಿಂದಾಗಿ ಕುಂದಾನಗರಿ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇಂದ್ರಪ್ರಸ್ತ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ನೀರು ನುಗ್ಗಿದೆ.

ಧಾರಕಾರ ಮಳೆಯಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆ ಜಲಾವೃತಗೊಂಡಿದ್ದು, ಪರಿಣಾಮ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಸಂಕಷ್ಟಕ್ಕೀಡಾಗಿದ್ದಾಳೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ನರಳಾಡುತ್ತಿದ್ದು, ಕೂಡಲೇ ಗರ್ಭಿಣಿಯನ್ನು ರಕ್ಷಿಸಿ ಬೇರೆಡೆ ಸ್ಥಳಾಂತರಿಸಲಾಗಿದೆ.

Home add -Advt

ಸ್ಟ್ರೆಚರ್ ಮೂಲಕ ಗರ್ಭಿಣಿಯನ್ನು ಆಸ್ಪತ್ರೆಯಿಂದ ಹೊರತಂದು ಆಂಬುಲೆನ್ಸ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ಸುತ್ತ ನೀರು ನಿಂತಿದ್ದು, ರೋಗಿಗಳು ಪರದಾಡುತ್ತಿದ್ದಾರೆ.
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವಾಗಿ ಪತ್ತೆ

Related Articles

Back to top button