ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಾಳೆ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲು ಯಡಿಯೂರಪ್ಪ ನಾಳೆ ಭೇಟಿ ನೀಡಲಿದ್ದಾರೆ.
ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ 2 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಅವರು ಉತ್ತರ ಕನ್ನಡ ಜಿಲ್ಲೆಗೆ ತೆರಳುವರು. ಕಾರನಾರ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದರು.
ಇಂದು ಸಂಜೆಯ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಸಂಬಂಧ ಹೈಕಮಾಂಡ್ ಸಂದೇಶ ಬರಲಿದೆ ಎಂದು ಕಾಯುತ್ತಿರುವ ಯಡಿಯೂರಪ್ಪ ನಾಳೆಯ ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಘೋಷಿಸುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.
ನಾನು ಸಂತೃಪ್ತನಾಗಿದ್ದೇನೆ. ರಾಜ್ಯದಲ್ಲಿ ಯಾರಿಗೂ ಸಿಗದ ಅವಕಾಶ, ಸ್ಥಾನ ಮಾನ ನನಗೆ ಸಿಕ್ಕಿದೆ. ನಾವೆಲ್ಲರೂ ಹೈಕಮಾಂಡ್ ಮಾತನ್ನು ಕೇಳಬೇಕಾಗುತ್ತದೆ. 2023ರ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಯಡಿಯೂರಪ್ಪ ತಿಳಿಸಿದರು.
ಹೌದು, ಸಂಜೆ ಬೆಳಗಾವಿಗೆ ಬರೋದ್ರೊಳಗೆ ಹೈಕಮಾಂಡ್ ಸಂದೇಶ ಬರುತ್ತೆ, ನಿಮಗೂ ತಿಳಿಯುತ್ತೆ -ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ