ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ. ಕಳೆದ ಎರಡು ವರ್ಷಗಳಿಂದ ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಇದನ್ನು ಜನರು ಗಮನಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸರ್ಕಾರದಲ್ಲಿ ಸ್ವಲ್ಪ ಮಟ್ಟನ ಗೊಂದಲವಿದೆ ಎಂಬುದನ್ನು ನಾನು ಒಪ್ಪುತ್ತೇನೆ. ಈ ಬಗ್ಗೆ ಸಿಎಂ ಯಡಿಯೂರಪ್ಪ, ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ. ಏನು ನಿರ್ಧಾರಕ್ಕೆ ಬರುತ್ತಾರೆ ಎಂಬುದು ಅವರಿಗೆ ಮಾತ್ರ ಗೊತ್ತು ಎಂದರು.
ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ರಾಜ್ಯದ ಜನರಿಗೆ ಮಾತ್ರವಲ್ಲ ನನಗೂ ಕೂಡ ಗೊಂದಲಗಳಿವೆ. ಈ ಬಗ್ಗೆ ಇಂದೇ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರುತ್ತಾರಾ ಇಲ್ಲವೇ ಎಂಬುದೂ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ