ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಪಾಲ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ ಸಿಎಂ ಯಡಿಯೂರಪ್ಪ, ನಾನಗಿಯೇ ಸ್ವಯಂ ಪ್ರೇರಿತನಾಗಿ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ದೆಹಲಿಯಿಂದ ನನಗೆ ಯಾವುದೇ ಒತ್ತಡವಿರಲಿಲ್ಲ. ನಾನಗೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸಿ ರಾಜೀನಾಮೆ ನೀಡಿದ್ದೇನೆ. ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ. ಆದರೆ ಜುಲೈ 26 ಇಂದು ಸರ್ಕಾರ ಎದಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶವಿರುವುದರಿಂದ ಇಂದು ರಾಜೀನಾಮೆ ನೀಡಲು ತೀರ್ಮಾಸಿದೆ. ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬ ಉದ್ದೇದಿಂದ ರಾಜೀನಾಮೆ ನೀಡಿದ್ದೇನೆ ಎಂದರು.
ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ನಾನು ಯಾರ ಹೆಸರನ್ನೂ ಸೂಚಿಸಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಇನ್ನು ನಾನು ರಾಜ್ಯಪಾಲರ ಹುದ್ದೆಯಾಗಲಿ ಅಥವ ಬೇರಾವ ಹುದ್ದೆಯನ್ನೂ ನಾನು ಸ್ವೀಕರಿಸಲ್ಲ. ಪಕ್ಷದ ಕಾರ್ಯಕರ್ತನಾಗಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
75 ವರ್ಷ ದಾಟಿದವರಿಗೆ ಯಾರಿಗೂ ಪಕ್ಷದಲ್ಲಿ ಅವಕಾಶ ನಿದಿಲ್ಲ ಆದರೆ ನನ್ನ ಮೇಲಿನ ವಿಶ್ವಾಸದಿಂದಾಗಿ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ನನಗೆ 2 ವರ್ಷ ಸಿಎಂ ಆಗಲು ಅವಕಾಶ ನೀಡಿದ್ದಾರೆ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇಷ್ಟು ವರ್ಷ ಆಡಳಿತ ನಡೆಸಲು ರಾಜ್ಯದ ಜನತೆ ಸೇವೆ ಮಾಡಲು ಅವಕಾಶ ನೀಡಿದ್ದಕ್ಕೆ ಪಕ್ಷಕ್ಕೆ, ಕಾರ್ಯಕರ್ತರುಗೆ ರಾಜ್ಯದ ಜನತೆಗೆ, ಸ್ವಾಮೀಜಿಗಳಿಗೆ ಧನ್ಯವಾದಗಳು ಎಂದರು.
ರಾಜ್ಯಪಾಲರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ