Latest

ಸಿಎಂ ರೇಸ್ ಮುಂಚೂಣಿಯಲ್ಲಿ ಬೊಮ್ಮಾಯಿ ಹೆಸರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಬಿರುಸುಗೊಂಡಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿ ಹೆಸರು ಅಧಿಕೃತವಾಗಿ ಘೋಷಿಸಲಿದ್ದಾರೆ.

ಸಭೆಗೂ ಮುನ್ನವೇ ನೂತನ ಸಿಎಂ ಫೈನಲ್ ಮಾಡಿರುವ ವರಿಷ್ಠರು ಸಭೆಯಲ್ಲಿ ಔಪಚಾರಿಕವಾಗಿ ಪ್ರಸ್ತಾಪಿಸಿ ಶಾಸಕರ ಒಪ್ಪಿಗೆ ಪಡೆಯಲಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಹೆಸರು ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ನಾಳೆ ಬೆಳಿಗ್ಗೆ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.
ಬಿಜೆಪಿಯಿಂದ ನೆರೆ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ‌ ನಡೆದಿಲ್ಲ: ಸಿದ್ಧರಾಮಯ್ಯ ಆರೋಪ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button