ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಕಾರವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಕಾರವಾರಕ್ಕೆ ಭೇಟಿ ನೀಡಿ ಅಲ್ಲಿನ ನೆರೆ ಪರಿಸ್ಥಿತಿ ಅವಲೋಕಿಸಲಾಗುವುದು. ವಾಪಸ್ ಬಂದ ನಂತರ ಬೆಂಗಳೂರಿನಲ್ಲಿ ಕುಳಿತು ಎಲ್ಲ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇನ್ನು ಮುಂದೆ ಅಧಿಕಾರಿಗಳಿಗೆ ಏನು ಮಾಡಿದರೂ ನಡೆಯುತ್ತದೆ ಎನ್ನುವ ಮನೋಭಾವನೆ ಬೇಡ. 2 ದಿನದಲ್ಲಿ ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಫೈಲ್ ಪೆಂಡಿಂಗ್ ಇದೆ ಎನ್ನುವ ಮಾಹಿತಿ ನೀಡಬೇಕು ಎಂದು ಕೇಳಿದ್ದೇನೆ. 15 ದಿನದಲ್ಲಿ ಪೆಂಡಿಂಗ್ ಫೈಲ್ ಗಳನ್ನು ಕ್ಲಿಯರ್ ಮಾಡಬೇಕು.
ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಾವಿರ ಕೋಟಿ ರೂ.ಗಳ ನೂತನ ವಿದ್ಯಾರ್ಥಿ ವೇತನ ಯೋಜನೆ ಜಾರಿಗೊಳಿಸಲಾಗುವುದು. ಸಂಧ್ಯಾ ಸುರಕ್ಷಾ ಯೋಜನೆ ಮಾಸಾಶನವನ್ನು 100 ರೂಗಳಿಂದ 1200 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.
ವಿಧವಾ ವೇತನ 600 ರೂಗಳಿಂದ 800 ರೂ. ಅಂಗವಿಕಲ ವೇತನವನ್ನು ಸಹ ಹೆಚ್ಚಿಸಲಾಗುವುದು ಎಂದರು.
ಅಡ್ವಕೇಟ್ ಜನರಲ್ ಆಗಿ ಪ್ರಭುಲಿಂಗ ನಾವಲಗಿ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದರು.
ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ