Latest

‘ಪುಷ್ಪ’ಗಾಗಿ ಸನ್ನಿ ಲಿಯೋನ್ ಡಿಮ್ಯಾಂಡ್ ಮಾಡಿದ ಸಂಭಾವನೆ ಗೊತ್ತೇ?

ಪ್ರಗತಿವಾಹಿನಿ ಸುದ್ದಿ; ಹೈದಾರಾಬಾದ್: ಅಲ್ಲು ಅರ್ಜಿನ್ ಅಭಿನಯದ ಟಾಲಿವುಡ್ ನ ಬಹುನಿರೀಕ್ಷಿತ ಚಿತ್ರ ಪುಷ್ಪ ಸಿನಿಮಾದ ಐಟಂ ಸಾಂಗ್ ಗಾಗಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಪಡೆಯುತ್ತಿರುವ ಸಂಭಾವನೆ ಬಗ್ಗೆ ಇದೀಗ ಭಾರಿ ಚರ್ಚೆ ಆರಂಭವಾಗಿದೆ.

ಪುಷ್ಪ ಚಿತ್ರ ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದ ಸ್ಪೆಷಲ್ ಸಾಂಗ್ ನಲ್ಲಿ ಸನ್ನಿ ಲಿಯೋನ್ ಕಾಣಿಸಿಕೊಳ್ಳುತ್ತಿದ್ದು, ಚಿತ್ರತಂಡ ಈಗಗಾಲೇ ಸನ್ನಿ ಸೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ ಎನ್ನಲಾಗಿದೆ.

Related Articles
Home add -Advt

ಪುಷ್ಪ ಚಿತ್ರದ ಒಂದು ಹಾಡಿನಲ್ಲಿ ಡ್ಯಾನ್ಸ್ ಮಾಡಲು ಸನ್ನಿ ಲಿಯೋನ್ ಬರೋಬ್ಬರಿ 50 ಲಕ್ಷ ಸಂಭಾವನೆ ಕೇಳಿದ್ದಾರಂತೆ. ಅಂದಹಾಗೇ ಸುಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ.

Related Articles

Back to top button