ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಸಹಯೋಗದೊಂದಿಗೆ ಮಾರ್ಚ್ ೧೯ ರಂದು ಬೆಳಗಾವಿಯ ಶಹಾಪುರದಲ್ಲಿ ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ದಾಳಿಯನ್ನು ನಡೆಸಿ ೨೭ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ದಾಳಿ ನಡೆಸಿದ ತಂಡವು ಸಾರ್ವಜನಿಕರಿಗೆ ಮತ್ತು ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಿದರು. ಕೋಟ್ಪಾ-೨೦೦೩ ಕಾಯ್ದೆ ಅಡಿಯಲ್ಲಿ ಒಟ್ಟು ೨೭ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಹಾಗೂ ಮಾಹಿತಿ ಫಲಕವನ್ನು ವಿತರಿಸಲಾಯಿತು.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ, ಜಿಲ್ಲಾ ಸಮಾಜ ಕಾರ್ಯಕತೆ ಕವಿತಾ ರಾಜನ್ನವರ, ಹಿರಿಯ ಆರೋಗ್ಯ ಸಹಾಯಕರಾದ ವಿ.ಸಿ ಪಾತಳಿ, ಪೊಲೀಸ್ ಸಿಬ್ಬಂದಿ ಎನ್.ಡಿ ತಳವಾರ ಅವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ