ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರಿ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಶಿರಸಿ ತಾಲೂಕುಗಳಲ್ಲಿ ಅನಾಹುತಗಳು ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಳೆಯಿಂದ ಸಂಭವಿಸಿದ ಅವಘಡಕ್ಕೆ ಮೂವರು ಸಾವನ್ನಪ್ಪಿದ್ದು, ಮೂವರು ಕಣ್ಮರೆಯಾಗಿದ್ದಾರೆ. ಸಮರೋಪಾದಿಯಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯಾಚರಣೆ, ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.
ಇನ್ನು ಶೀಘ್ರದಲ್ಲೇ ದೆಹಲಿಗೆ ತೆರಳುತ್ತಿದ್ದು, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ನಡ್ಡಾ ಅವರನ್ನು ಭೇಟಿಯಾಗುತ್ತೇನೆ. ಜಿಎಸ್ ಟಿ ಪರಿಹಾರ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಇನ್ನು ರಾಜ್ಯ ಸಚಿವ ಸಂಪುಟ ಇನ್ನೊಂದು ದೆಹಲಿ ಭೇಟಿಯಲ್ಲಿ ಫೈನಲ್ ಆಗಲಿದೆ ಎಂದು ಹೇಳಿದರು.
ಬೊಮ್ಮಾಯಿ ಅಭಿನಂದಿಸಿದ ಡಾ.ಪ್ರಭಾಕರ ಕೊರೆ ಕೇಳಿದ್ದೇನು ಗೊತ್ತೆ ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ