ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ನೂತನ ಸಂಪುಟದಲ್ಲಿ ಸಚಿವನಾಗಿ ಮುಂದುವರೆಯಲ್ಲ ಎಂದು ಹೇಳಿಕೆ ನಿಡಿರುವ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರೊಂದಿಗೆ ಮತ್ತೊಮ್ಮೆ ಮಾತನಾಡಿ ಚರ್ಚಿಸುತ್ತೇನೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಜಗದೀಶ್ ಶೆಟ್ಟರ್ ಈಗಾಗಲೇ ತಮ್ಮ ವಿಚಾರಗಳನ್ನು ಹೇಳಿದ್ದಾರೆ. ನಿನ್ನೆ ಅವರೊಂದಿಗೆ ಮಾತನಾಡಿದ್ದೆ. ಇಂತಹ ನಿರ್ಧಾರ ಬೇಡ ವೈಯಕ್ತಿಕವಾಗಿ ಭೇಟಿಯಾಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದೇನೆ. ಶೆಟ್ಟರ್ ನನ್ನ ಆತ್ಮೀಯ, ಅವರ ಬಗ್ಗೆ ನನಗೆ ಅಭಿಮಾನವಿದೆ. ಶೀಘ್ರದಲ್ಲೇ ಶೆಟ್ಟರ್ ಭೇಟಿಯಾಗಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹಿರಿಯರ ಜೊತೆ ಚರ್ಚಿಸುತ್ತೇನೆ. ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.
ಮುಜುಗರವಾಗುವುದು ಬೇಡ; ಸ್ವಾಭಿಮಾನದಿಂದ ನಿರ್ಧಾರ ಕೈಗೊಂಡಿದ್ದೇನೆ ಎಂದ ಶೆಟ್ಟರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ