Latest

ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ, ಗೌರವ ಸಮರ್ಪಿಸಿದರು.

ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು. ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದರು.

Home add -Advt

ಇದೇ ವೇಳೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದ ಶ್ರೀಗಳನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹುಬ್ಬಳ್ಳಿಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ ,ಶಾಸಕ ಶಿವರಾಮ್ ಹೆಬ್ಬಾರ , ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ ಸೇರಿದಂತೆ ,ಕುಟುಂಬದ ಬಂಧುಗಳು, ರಾಜಕೀಯ ಪಕ್ಷಗಳ ಮುಖಂಡರು,ಅಭಿಮಾನಿಗಳು ನೆರೆದಿದ್ದರು.

ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದುಕೊಂಡಿರಲಿಲ್ಲ; ಅವಳಿ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ ಎಂದ ಬೊಮ್ಮಾಯಿ

Related Articles

Back to top button