ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ನೂತನ ಸಚಿವ ಸಂಪುಟ ರಚನೆಯಲ್ಲಿ ನಾನು ಹಸ್ತಕ್ಷೇಪ ಮಾಡಲ್ಲ. ಯಾವ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಗಣೇಶ್ ಚತುರ್ಥಿ ಬಳಿಕ ವಾರಕ್ಕೊಂದು ಜಿಲ್ಲೆಯಂತೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಬಲಪಡಿಸುತ್ತೇನೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ. ನನ್ನ ಕಣ್ಣೆದುರೇ ಯೋಗ್ಯ ನಾಯಕನನ್ನು ಬೆಳೆಸಬೇಕು ಎಂಬುದು ಉದ್ದೇಶ ಎಂದು ಹೇಳಿದರು.
ಸಚಿವ ಸಂಪುಟ ರಚನೆ ವಿಚಾರದಲ್ಲಿ ನಾನು ಯಾವುದೇ ಸಲಹೆಗಳನ್ನು ಕೊಡಲ್ಲ. ಬಿಜೆಪಿಗೆ ಬಂದ 17 ಶಾಸಕರ ಬಗ್ಗೆಯೂ ನಾನು ಏನೂ ಹೇಳಲ್ಲ. ಅವರಿಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂ ಬೊಮ್ಮಾಯಿಗೆ ಬಿಟ್ಟಿದ್ದು. ಸಂಪುಟ ರಚನೆಯಲ್ಲಿ ಬೊಮ್ಮಾಯಿ ಸ್ವತಂತ್ರರು. ಹಾಗಾಗಿ ಸಂಪುಟ ರಚನೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನನ್ನದೇನಿದ್ದರೂ ಪಕ್ಷ ಸಂಘಟನೆ ನಿಟ್ಟಿನಲ್ಲಿ ಕೆಲಸ ಎಂದು ತಿಳಿಸಿದರು.
ಸಂಜೆ 4ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಬೊಮ್ಮಾಯಿ; ವರಿಷ್ಠರ ಭೇಟಿಗೆ ಸಮಯ ನಿಗದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ