ಅಮಿತ್ ಶಾ, ಸೇರಿ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಎಂ ಆದ ಬಳಿಕ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿರುವ ಬಸವರಾಜ್ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಸಂಸತ್ ಭವನದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಮುಖ್ಯಮಂತ್ರಿಯನ್ನಾಗಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಹೂಗುಚ್ಛ ನೀಡಿ ಧನ್ಯವಾದ ಹೇಳಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ಭೆಟಿಯಾದರು.

ಸಂಸದರಾದ ಶಿವಕುಮಾರ್ ಉದಾಸಿ ಮತ್ತು ಡಾ. ಉಮೇಶ್ ಜಾಧವ್, ಮಾಜಿ ಸಚಿವರಾದ ಆರ್. ಅಶೋಕ್, ಉಮೇಶ್ ವಿ. ಕತ್ತಿ ಕೂಡ ನೂತನ ಸಿಎಂ ಜೊತೆಗಿದ್ದರು.
ಸಂಜೆ 4ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಬೊಮ್ಮಾಯಿ; ವರಿಷ್ಠರ ಭೇಟಿಗೆ ಸಮಯ ನಿಗದಿ
17 ವಲಸಿಗ ಶಾಸಕರಿಗೆ ಶಾಕ್ ನೀಡಿದ ಬಿಎಸ್ ವೈ




