Latest

ತುಮಕೂರಲ್ಲಿ ಮೈತ್ರಿಗೆ ಭಂಗ: ಮುದ್ದಹನುಮೇಗೌಡ ಕಣಕ್ಕೆ

ಪ್ರಗತಿವಾಹಿನಿ ಸುದ್ದಿ, ತುಮಕೂರು

ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಹಾಲಿ ಸಂಸದ ಮುದ್ದಹನಮೇಗೌಡ ನಿರ್ಧರಿಸಿದ್ದಾರೆ.

ಶನಿವಾರ ಅಭಿಮಾನಗಳ ಸಭೆ ನಡೆಸಿದ ಅವರು, ಕಾರ್ಯಕರ್ತರ ಹರ್ಷೋದ್ಘಾರದ ಮಧ್ಯೆ ತಮ್ಮ ಸ್ಪರ್ಧೆಯ ನಿರ್ಧಾರ ಘೋಷಿಸಿದರು.

ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಅವರು, ಪಕ್ಷದ ನಾಯಕರು ಈಗಲೂ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವ ತೀರ್ಮಾನದಿಂದ ಹಿಂದೆ ಸರಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

Home add -Advt

ನನ್ನನ್ನು ಯಾವುದೇ ರೀತಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಗೆ ತುಮಕೂರು ಕ್ಷೇತ್ರ ಬಿಟ್ಟುಕೊಡಲಾಗಿದೆ. ಬೇರೆ ಬೇಕಾದಷ್ಟು ಕ್ಷೇತ್ರಗಳಿರುವಾಗಲೂ ಹಾಲಿ ಸಂಸದರಿರುವ ಕ್ಷೇತ್ರವನ್ನೇ ಏಕೆ ಆಯ್ಕೆ ಮಾಡುತ್ತಿದ್ದೀರಿ?  10ರಲ್ಲಿ ಉಳಿದ 9 ಹಾಲಿ ಸಂಸದರಿಗೆ ಟಿಕೆಟ್ ಕೊಟ್ಟು ನನಗೆ ಮಾತ್ರ ಏಕೆ ಇಲ್ಲ ಎಂದು ಪ್ರಶ್ನಿಸಿದ ಅವರು ಇದು ಹೇಗೆ ಮೈತ್ರಿ ಧರ್ಮವಾಗುತ್ತದೆ ಎಂದು ಕಿಡಿಕಾರಿದರು.

ನಾನು ಸ್ಪರ್ಧಿಸಬೇಕೆನನ್ನುವುದು ಜನರ ತೀರ್ಮಾನ. ಜನರ ತೀರ್ಮಾನವೇ ಎಲ್ಲದಕ್ಕೂ ಅಂತಿಮ. ಕಾಂಗ್ರೆಸ್ ನ ಯಾವು ನಾಯಕರೂ ನನ್ನೊಂದಿಗೆ ಮಾತನಾಡಿಲ್ಲ ಎಂದು ಅವರು ಹೇಳಿದರು. 

ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 20 ಮತ್ತು ಜೆಡಿಎಸ್ 8 ಕ್ಷೇತ್ರಗಳನ್ನು ಹಂಚಿಕೊಂಡು ಸ್ಪರ್ಧಿಸುತ್ತಿದ್ದು, ತುಮಕೂರನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಮುದ್ದಹನುಮೇಗೌಡ ತುಮಕೂರು ಕ್ಷೇತ್ರದ ಕಾಂಗ್ರೆಸ್ ನ ಹಾಲಿ ಸಂಸದರು. 

ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಣಕ್ಕಿಳಿಯುವ ಸಾಧ್ಯತೆ ಇದೆ. 

(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ ಹಾಗೂ ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button