Latest

ನೂತನ ಸಚಿವರ ಪಟ್ಟಿ ; ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಭೇಟಿ ವೇಳೆ ಯಾವುದೇ ಚರ್ಚೆಯಾಗಿಲ್ಲ. ವರಿಷ್ಠರ ಸೂಚನೆಯಂತೆ ಸಂಪುಟ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸಂಪುಟ ರಚನೆ ವಿಚಾರವಾಗಿ ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ. ಮಧ್ಯಾಹ್ನದೊಳಗೆ ಲಿಸ್ಟ್ ಬರುತ್ತೋ ಇಲ್ವೋ ಗೊತ್ತಿಲ್ಲ. ಈ ಬಗ್ಗೆ ನನಗಿನ್ನೂ ಯಾವುದೇ ಕರೆ ಬಂದಿಲ್ಲ. ಸೂಚನೆ ಬಂದ ಕೂಡಲೇ ಸಚಿವರ ಪಟ್ಟಿ ಬಗ್ಗೆ ಚರ್ಚಿಸುತ್ತೇನೆ ಎಂದರು.

ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದು,  ಬಳಿಕ ಕೋವಿಡ್ ಕುರಿತು ಎರಡು ಸಭೆ ನಡೆಸಲಾಗುವುದು. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚವಹಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಇನ್ನೊಮ್ಮೆ 8 ಜಿಲ್ಲೆಗಳ ಅಧಿಕಾರಿಗಳ ಜೊತೆ ಚರ್ಚಿಸಿ ಕೈಗೊಳ್ಳಬೇಕಾದ ಬಿಗಿ ಕ್ರಮಗಳ ಬಗ್ಗೆ ಸೂಚಿಸಲಾಗುವುದು. ಇನ್ನೊಂದು ಸಭೆಯಲ್ಲಿ ಲಸಿಕೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ವಿಚಾರವಾಗಿ ಚರ್ಚಿಸಲಾಗುವುದು ಎಂದರು.

ಈವರೆಗೆ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದವರನ್ನು ತಪಾಸಣೆ ನಡೆಸಿ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಇನ್ಮುಂದೆ ರೈಲ್ವೆ ಮಾರ್ಗಗಳಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗುವುದು ಎಂದರು.

Home add -Advt

ಮತ್ತೆ ಕೊರೋನಾ ಆತಂಕ: ಸಂಜೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ: ಅನಿವಾರ್ಯವಾಗುತ್ತಾ ಲಾಕ್ ಡೌನ್ ?

Related Articles

Back to top button