ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆ ಸಚಿವಾಕಾಂಕ್ಷಿಗಳು ಸಿಎಂ ನಿವಾಸಕ್ಕೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ.
ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬಿ.ಸಿ.ಪಾಟೀಲ್, ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಬೊಮ್ಮಾಯಿ ಅವರ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ.
ಇದೇ ವೇಳೆ ಬಿ.ಎಸ್.ಯಡಿಯೂರಪ್ಪನವರ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ರಮೇಶ್ ಕೂಡ ಸಿಎಂ ಬೊಮ್ಮಾಯಿ ಭೇಟಿಯಾಗಿದ್ದಾರೆ. ನೂತನ ಸಿಎಂ ಅವರಿಗೆ ಶುಭಾಷಯ ಕೋರಲು ಬಂದಿದ್ದೆ ಹೊರತು ರಾಜಕೀಯ ಚರ್ಚೆ ನಡೆಸಿಲ್ಲ. ಅರಸಿಕೆರೆ ನೀರಾವರಿ ಯೋಜನೆ ಬಗ್ಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
ನಾಳೆ ಸಂಜೆಯ ಹೊತ್ತಿಗೆ ಸಂಪುಟ ರಚನೆ ಕುರಿತು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದ್ದು, ಆಕಾಂಕ್ಷಿಗಳ ಒತ್ತಡ ಹೆಚ್ಚುತ್ತಿದೆ.
ಸಂಭಾವ್ಯ ಪಟ್ಟಿಯಲ್ಲಿ ಹೆಸರು: ಸಂಪುಟ ಸೇರುತ್ತಾರಾ ಅಭಯ ಪಾಟೀಲ ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ