Latest

ಪ್ರತಿಭಟನಾ ನಿರತರ ಮೇಲೆ ಲಾಠಿಚಾರ್ಜ್; ಹಲವು ಆಫ್ರಿಕನ್ಸ್ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಆಫ್ರಿಕನ್ ಪ್ರಜೆಗಳ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಹಲವರನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಜೆ.ಸಿ.ನಗರ ಠಾಣೆ ಎದುರು ನಡೆದಿದೆ.

ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವನ್ನಪ್ಪಿದ್ದ ಬೆನ್ನಲ್ಲೇ ಆತನ ಸಂಬಂಧಿಕರು, ಸ್ನೇಹಿತರು ಹಾಗೂ ಇತರ ಆಫ್ರಿಕನ್ ಪ್ರಜೆಗಳು ಜೆ.ಸಿನಗರ ಠಾಣೆ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಹಲ್ಲೆಗೆ ಯತ್ನಿಸಿದ್ದರು.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.

ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು; ಠಾಣೆ ಎದುರು ಪ್ರತಿಭಟನೆ; ಪೊಲೀಸರ ಮೇಲೆ ಹಲ್ಲೆಗೆ ಯತ್ನ

 

ಕ್ಲಬ್ ಹೌಸ್ ನಲ್ಲಿ ಸೆಕ್ಸ್ !

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button