ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಯಡಿಯೂರಪ್ಪ ಸಚಿವಸಂಪುಟದಲ್ಲಿ ಉಪಮುಖ್ಯಮಂತ್ರಿ ಸೇರಿ ನಾಲ್ಕು ಸಚಿವಸ್ಥಾನ ಪಡೆದಿದ್ದ ಬೆಳಗಾವಿ ಬೊಮ್ಮಾಯಿ ಸಂಪುಟದಲ್ಲಿ ಕೇವಲ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.
ಯಡಿಯೂರಪ್ಪ ಸಂಪುಟದಲ್ಲಿ ಕೊನೆಯ ಕ್ಷಣದಲ್ಲಿ ಸ್ಥಾನ ಪಡೆದಿದ್ದ ಉಮೇಶ ಕತ್ತಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜೊತೆಗೆ ಯಡಿಯೂರಪ್ಪ ಸಂಪುಟದಲ್ಲಿ ಆರಂಭದಿಂದಲೂ ಸ್ಥಾನ ಪಡೆದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಯೋಜನೆಗಳನ್ನು ರೂಪಿಸಿದ್ದ ಶಶಿಕಲಾ ಜೊಲ್ಲೆ ಕೂಡ ಮತ್ತೆ ಸ್ಥಾನ ಪಡೆದಿದ್ದಾರೆ.
ಜೊಲ್ಲೆ ದಂಪತಿ ಮೂಲ ಬಿಜೆಪಿಗರು. ಜೊತೆಗೆ ಸಂಘಪರಿವಾರ ಮತ್ತು ಬಿಜೆಪಿ ಹೈಕಮಾಂಡ್ ಜೊತೆಗೂ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಅವರು ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜಾರಕಿಹೊಳಿ ಸಹೋದರರ ಪೈಕಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಈ ಬಾರಿ ಸ್ಥಾನ ನೀಡಲಾಗುತ್ತದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಅವರಿಗೆ ಅವಕಾಶ ಸಿಕ್ಕಿಲ್ಲ. ಶ್ರೀಮಂತ ಪಾಟೀಲ ತಮ್ಮ ಕಳಪೆ ಸಾಧನೆಯಿಂದಾಗಿ ಸಚಿವಸ್ಥಾನ ಕಳೆದುಕೊಂಡಿದ್ದಾರೆ.
ಲಕ್ಷ್ಮಣ ಸವದಿ ಸ್ಥಾನ ಕಳೆದುಕೊಳ್ಳಲು ಕಾರಣ ಇನ್ನೂ ಖಚಿತವಾಗಿಲ್ಲ. ಅಭಯ ಪಾಟೀಲ, ಪಿ.ರಾಜೀವ ಅವರಿಗೆ ಸ್ಥಾನ ಸಿಗಬಹುದೆನ್ನುವ ನಿರೀಕ್ಷೆ ಇತ್ತು. ಆನಂದ ಮಾಮನಿ ಸಚಿವಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು.
ಅಂತಿಮವಾಗಿ ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಸ್ಥಾನ ನೀಡಿದಂತಾಗಿದೆ.
29 ಸಚಿವರಿಂದ ಪ್ರಮಾಣ ವಚನ, ಈ ಬಾರಿ ಡಿಸಿಎಂ ಹುದ್ದೆ ಇಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ