ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಪೂರ್ಣಪ್ರಮಾಣದ ಮಂತ್ರಿ ಮಂಡಳದ ಮೊದಲ ಸಚಿವ ಸಂಪುಟ ಸಭೆ ಬುಧವಾರ ಸಂಜೆ ನಡೆಯಿತು.
ಸಭೆಯ ನಂತರ ಬೊಮ್ಮಾಯಿ ಪತ್ರಿಕಾಗೋಷ್ಠಿ ನಡೆಸಿ ಸಂಪುಟ ಸಭೆ ನಿರ್ಣಯಗಳ ಮಾಹಿತಿ ನೀಡಿದರು. ಪ್ರಮುಖ ಅಂಶಗಳು ಹೀಗಿವೆ:
- ಎಲ್ಲ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಎಲ್ಲ ಸಚಿವರಿಗೆ ಸೂಚಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು.
- ಜಿಲ್ಲಾ ಉಸ್ತುವಾರಿಗಳನ್ನು ನಾಳೆ ಸಂಜೆಯಷ್ಟರಲ್ಲಿ ಘೋಷಿಸಲಾಗುವುದು
- ಮಂತ್ರಿಗಳಿಗೆ ಖಾತೆಗಳನ್ನು 2 ದಿನದಲ್ಲಿ ನೀಡಲಾಗುವುದು
- ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚಿಸಲಾಗುವುದು
-
ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್ ಟಿ ಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಯಿತು.
-
ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ಮಾಡಲಾಯಿತು.
ಝೀರೋ ಟ್ರಾಫಿಕ್ ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ