ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನಾಳೆ ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುವುದು. ಜಿಲ್ಲಾ ಉಸ್ತುವಾರಿಗಳನ್ನು ಇನ್ನು 2 ದಿನದಲ್ಲಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಧ್ಯಕ್ಕೆ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿ ಅವಲೋಕಿಸಿ ವರದಿ ನೀಡಲು ಉಸ್ತುವಾರಿ ಜಿಲ್ಲೆಗಳ ಹಂಚಿಕೆಯಾಗಿದೆ. ಅದು ಅಂತಿಮವಲ್ಲ, ಇನ್ನು 2 ದಿನದಲ್ಲಿ ಎಲ್ಲರಿಗೂ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಖಾತೆಗಳನ್ನು ನಾಳೆ ಸಂಜೆಯೊಳಗೆ ಹಂಚಿಕೆ ಮಾಡಲಾಗುವುದು ಎಂದೂ ಅವರು ಹೇಳಿದರು.
ಕೊಳ್ಳೆಗಾಲ ಶಾಸಕ ಎನ್.ಮಹೇಶ ಬಿಜೆಪಿ ತತ್ವ, ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಅವರನ್ನು ಸೇರಿಸಿಕೊಳ್ಳಲಾಗಿದೆ. ಅವರಿಗೆ ಮಂತ್ರಿಸ್ಥಾನ ಕೊಡುವ ಬಗ್ಗೆ ಸಧ್ಯಕ್ಕೆ ಯಾವುದೇ ಪ್ರಸ್ತಾಪವಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಮೇಕೆೆದಾಟು ಯೋಜನೆ ನಮ್ಮ ಹಕ್ಕು. ಈ ಕುರಿತು ಸುಪ್ರಿಂ ಕೋರ್ಟ್ ತೀರ್ಪು ನೀಡಿಯಾಗಿದೆ. ತಮಿಳುನಾಡಿನಲ್ಲಿ ಅಣ್ಣಾ ಮಲೈ ಇರಲಿ, ಬೇರೆ ಯಾರೇ ಇರಲಿ ಧರಣಿ ಮಾಡದರೆ ಅದು ರಾಜಕೀಯ ಉದ್ದೇಶಕ್ಕಷ್ಟೆ ಸೀಮಿತ. ನಾವು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಿಎಂ ತಿಳಿಸಿದರು.
ಕಳೆದ 2 ದಶಕದಲ್ಲಿ ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟಿದ್ದು ಇದೇ ಮೊದಲು
ನೂತನ ಸಚಿವರಿಗೆ ಕೋವಿಡ್, ನೆರೆ ವೀಕ್ಷಣೆಗೆ ಜಿಲ್ಲೆ ಹಂಚಿಕೆ
ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ