Latest

ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪತಿಯ ವಿರುದ್ಧ ಪತ್ನಿ ದೂರು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಪ್ರಾದ್ಯಾಪಕನೇ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿಯ ಪತ್ನಿ ಹಾಗು ಸಂತ್ರಸ್ತ ವಿದ್ಯಾರ್ಥಿನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರೊ.ರಾಮಚಂದ್ರಪ್ಪ ವಿರುದ್ಧ ದೂರು ಕೇಳಿಬಂದಿದ್ದು, ಪತ್ನಿ ಕೂಡ ಇದೇ ವಿವಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿದ್ದಾರೆ.

ವಿದ್ಯಾರ್ಥಿನಿಯೊಬ್ಬರು ಪ್ರೊ.ರಾಮಚಂದ್ರಪ್ಪ ಮಾರ್ಗದರ್ಶನದಲ್ಲಿ ಪಿಹೆಚ್ ಡಿ ಮಾಡುತ್ತಿದ್ದರು. ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕರೆಸಿಕೊಂಡ ಪ್ರಾಧ್ಯಾಪಕ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಯುವತಿ ಸಹಾಯಕ್ಕಾಗಿ ಕೂಗಿದ್ದಾಳೆ. ಇದೇ ವೇಳೆ ಕಾಲೇಜಿನಿಂದ ಮನೆಗೆ ಬಂದ ಪತ್ನಿಗೆ ವಿಷಯ ಗೊತ್ತಾಗಿದೆ.

ತಕ್ಷಣ ಸಂತ್ರಸ್ತ ಯುವತಿ ಹಾಗೂ ಪೋಷಕರೊಂದಿಗೆ ಪೊಲಿಸ್ ಠಾಣೆಯಲ್ಲಿ ಪ್ರೊ.ರಾಮಚಂದ್ರಪ್ಪ ಪತ್ನಿಯೇ ದೂರು ನೀಡಿದ್ದು, ಈ ಹಿಂದೆಯೂ ರಾಮಚಂದ್ರಪ್ಪ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು. ಆದರೆ ಯಾವುದೇ ಆಧಾರವಿಲ್ಲ ಎಂಬ ಕಾರಣಕ್ಕೆ ದೂರು ನೀಡಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಸ್ಪಷ್ಟ ಸಾಕ್ಷ್ಯ ಸಿಕ್ಕಿದ್ದು, ರಾಮಚಂದ್ರಪ್ಪ ವಿರುದ್ಧ ದೂರು ದಾಖಲಿಸಿದ್ದಾಗಿ ತಿಳಿಸಿದ್ದಾರೆ.
ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button