
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆಯೇ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ದಟ್ಟವಾಗಿದೆ.
ಈಗಾಗಲೇ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಮುಗಿದಿದ್ದು, ನಿನ್ನೆಯೇ ಎಸ್.ಎಸ್.ಎಲ್.ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಫಲಿತಾಂಶ ಸಲ್ಲಿಕೆ ಮಾಡಿದ್ದಾರೆ.
ಈ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಚರ್ಚೆ ನಡೆಸಲಿದ್ದಾರೆ. ಬಳಿಕ ನಾಳೆಯೇ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪತಿಯ ವಿರುದ್ಧ ಪತ್ನಿ ದೂರು