ಬೆಳಗಾವಿ ಸೇರಿ 8 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ವೀಕ್ ಎಂಡ್ ಕರ್ಫ್ಯೂ: ನಾಳೆ, ನಾಡಿದ್ದು ಏನೆಲ್ಲ ಇರಲಿದೆ?
ಇನ್ನು ಕೆಲವೇ ಹೊತ್ತಿನಲ್ಲಿ ಸ್ಪಷ್ಟ ಮಾರ್ಗಸೂಚಿ ಬಿಡುಗಡೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ 8 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ.
ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರಲಿದೆ.
ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಕೂಡ ಹಾಕಲು ನಿರ್ಧರಿಸಲಾಗಿದೆ.
ಬೆಳಗಾವಿ, ವಿಜಯಪುರ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜ ನಗರ, ಕೊಡಗು, ಬೀದರ್, ಕಲಬುರಗಿಗಳಲ್ಲಿ ನೈಟ್ ಮತ್ತು ವೀಕ್ ಎಂಡ್ ಎರಡೂ ಕರ್ಫ್ಯೂ ಜಾರಿಯಾಗಲಿದೆ.
ಆದರೆ ಈ ಬಾರಿಯ ವೀಕ್ ಎಂಡ್ ಕರ್ಫ್ಯೂ ಯಾವ ರೀತಿ ಇರಲಿದೆ ಎನ್ನುವುದು ಇನ್ನಷ್ಟೆ ಗೊತ್ತಾಗಬೇಕಿದೆ. ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿಗಳು ಸಿಗಲಿದೆಯೇ ಎನ್ನುವುದು ಗೊತ್ತಾಗಿಲ್ಲ. ಯಾವುದಕ್ಕೆಲ್ಲ ಅವಕಾಶವಿದೆ? ಬಸ್ ಓಡಾಟ ಇರಲಿದೆಯೇ? ಸರಕಾರಿ ಕಚೇರಿಗಳು ಇರಲಿವೆಯೇ? ಎನ್ನುವುದು ಗೊತ್ತಾಗಬೇಕಿದೆ.
ಇದಕ್ಕಾಗಿ ಸರಕಾರ ಇನ್ನು ಕೆಲವೇ ಹೊತ್ತಿನಲ್ಲಿ ಸ್ಪಷ್ಟ ಮಾರ್ಗಸೂಚಿ ಬಿಡುಗಡೆ ಮಾಡಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ