ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಬಿಜೆಪಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿದ್ದು, ಈ ಬಗ್ಗೆ ಸ್ವತ: ಚನ್ನಣ್ಣನವರ್ ಸ್ಪಷ್ಟನೆ ನೀಡಿದ್ದಾರೆ.
ರವಿ ಡಿ.ಚನ್ನಣ್ಣನವರ್ ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರವಿ ಡಿ.ಚನ್ನಣ್ಣನವರ್, ನಾನು ‘ಭರವಸೆ’ ಎಂಬ ಪುಸ್ತಕ ಬರೆಯುತ್ತಿದ್ದು ಈ ಬಗ್ಗೆ ಚರ್ಚಿಸಲು ಇತ್ತೀಚೆಗೆ ನನ್ನ ಹಳೆ ಸ್ನೇಹಿತರನ್ನು ಭೇಟಿಯಾಗಿದ್ದೆ. ಕೆಲ ದೇವಾಲಯಗಳಿಗೆ ಹಾಗೂ ಶ್ರೀಮಠಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ನಾನು ರಾಜಕೀಯ ಸೇರುತ್ತಿರುವುದಾಗಿ ಸುದ್ದಿ ಬಿತ್ತರವಾಗುತ್ತಿದೆ. ನಾನು ರಾಜಕೀಯ ಸೇರುತ್ತಿರುವ ವಿಚಾರ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಬಿಜೆಪಿಗೆ ಸೇರ್ಪಡೆಯಾಗಲಿದ್ದಾರಾ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್?
ಖೇಲ್ ರತ್ನ ಪ್ರಶಸ್ತಿ: ರಾಜೀವ್ ಗಾಂಧಿ ಹೆಸರು ಬದಲಿಸಿದ ಕೇಂದ್ರ ಸರ್ಕಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ