ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದಲೇ ಹೊಸ ಮಾರ್ಗಸೂಚಿ ಜಾರಿಯಾಗಿದೆ.
ಕೇರಳ ಮತ್ತು ಮಹಾರಾಷ್ಟ್ರ ಗಡಿಯ 9 ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಯಾಗಿದ್ದು, ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.
ವೀಕ್ ಎಂದ್ ಕರ್ಫ್ಯೂ ಜಿಲ್ಲೆಗಳಲ್ಲಿ ( ಬೆಳಗಾವಿ ಸೇರಿ 9 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ವೀಕ್ ಎಂಡ್ ಕರ್ಫ್ಯೂ: ನಾಳೆ, ನಾಡಿದ್ದು ಏನೆಲ್ಲ ಇರಲಿದೆ? ) ಪ್ರತ್ಯೇಕ ಮಾರ್ಗಸೂಚಿ ಜಾರಿಯಾಗಿದೆ.
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
ಕೇವಲ ಅವಶ್ಯಕ ಸೇವೆ ಒದಗಿಸುವ ಸರಕಾರಿ ಇಲಾಖೆಗಳು, ಟೆಲಿಕಾಂ ಸಿಬ್ಬಂದಿ ಕೆಲಸ ಮಾಡಬಹುದು. ಆಹಾರೋದ್ಯಮ ಸೇರಿದಂತೆ ಅವಶ್ಯಕ ಸೇವೆ ಒದಗಿಸುವ ಉದ್ಯಮಗಳು ವ್ಯವಹಾರ ಮಾಡಬಹುದು.
ಸಮಗ್ರ ಮಾರ್ಗಸೂಚಿಗೆ ಇಲ್ಲಿ ಕ್ಲಿಕ್ ಮಾಡಿ – RD 158-TNR-21
ಬೆಳಗಾವಿ ಸೇರಿ 9 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ವೀಕ್ ಎಂಡ್ ಕರ್ಫ್ಯೂ: ನಾಳೆ, ನಾಡಿದ್ದು ಏನೆಲ್ಲ ಇರಲಿದೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ